ಮಲಗಿದ್ದ ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮಗು ಸಾವು;ಶಾಕಿಂಗ್ ಘಟನೆ ವರದಿ

ಮಲಗಿದ್ದ ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮಗು ಸಾವು;ಶಾಕಿಂಗ್ ಘಟನೆ ವರದಿ

ಛತ್ತೀಸ್‌ಗಢ;ಕೋಬ್ರಾದಲ್ಲಿ ಮಲಗಿದ್ದ ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮುಗ್ಧ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.
ನಾಗಿನಬಂಡಾ ಪ್ರದೇಶದಲ್ಲಿ ರಾಜ್‌ಕುಮಾರ್ ಚಂಡೆ ಎಂಬುವರ ಕುಟುಂಬವು ವಾಸಿಸುತ್ತಿದ್ದು, ಇವರ ಮಗು ಜಗದೀಶ್​​ ಮೃತಪಟ್ಟಿದೆ.

ಎರಡೂವರೆ ವರ್ಷದ ಜಗದೀಶ್ ಮಲಗಿದ್ದ, ಸ್ವಲ್ಪ ಸಮಯದ ನಂತರ ಮಲಗಿದ್ದ ಮಗುವಿಗೆ ತಾಯಿ ನೋಡಿದಾಗ ಮಗು ನಿಶ್ಚಲವಾಗಿತ್ತು.ಕೂಡಲೇ ಅನುಮಾನಗೊಂಡ ತಾಯಿಯು ಬಾಲಕನ ಹತ್ತಿರ ಬಂದು ನೋಡಿದಾಗ ಆತನ ಬಾಯಲ್ಲಿ ಹಲ್ಲಿ ಸತ್ತು ಬಿದ್ದಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದು ಕೂಡಲೇ ಅಕ್ಕಪಕ್ಕದವರಿಗೆ ತಿಳಿಸಿದ್ದಾಳೆ.

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬಾಲಕ ಹಲ್ಲಿ ನುಗ್ಗಿ ಸತ್ತಿದ್ದಾನೆಯೇ ಅಥವಾ ಉಸಿರುಕಟ್ಟುವಿಕೆಯಿಂದ ಮೃತಪಟ್ಟಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರವಷ್ಟೇ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ