ಪ್ರೀತಿಸಿ ಮೋಸ ಮಾಡಿದ ಯುವಕನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ, ಯುವಕನ ಸ್ಥಿತಿ‌ ಗಂಭೀರ; ಶಾಕಿಂಗ್ ಘಟನೆ

-27 ವರ್ಷದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಯುವತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ; ತಮಿಳುನಾಡಿನ ಈರೋಡ್‌ನಲ್ಲಿ ಪ್ರೀತಿಸಿ‌ ಮೋಸ ಮಾಡಿದ ತನ್ನ 27 ವರ್ಷದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಯುವತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಯುವಕ ಕಾರ್ತಿ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದಾನೆ.ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ.ತನ್ನ ಸಂಬಂಧಿಕರೊಬ್ಬರಾದ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದು, ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ತಿ ಈಗ ಬೇರೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದು ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ.

ಇದರಿಂದಾಗಿ ಕೈ ಮತ್ತು ಮುಖ ಉರಿಯಲಾರಂಭಿಸಿದ್ದರಿಂದ ಕಾರ್ತಿ ನೆಲಕ್ಕೆ ಬಿದ್ದಿದ್ದಾನೆ.ಸಹಾಯಕ್ಕಾಗಿ ಆತನ ಕೂಗು ಕೇಳಿದ ನೆರೆಹೊರೆಯವರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಮೀನಾದೇವಿಯನ್ನು ಬಂಧಿಸಲಾಗಿದೆ.ಈ ಘಟನೆ ಕುರಿತಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com