ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ‌ ಮೇಲೆ ಗಂಭೀರ ಸ್ವರೂಪದ ಹಲ್ಲೆ ನಡೆಸಿದ ಪೊಲೀಸರು!

 

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಪಿ ಚಿದಂಬರಂ ಅವರ ಮೇಲೆ ಪೊಲೀಸರು ಇಡಿ ವಿರುದ್ಧ ‌ನಿನ್ನೆಯ ಪ್ರತಿಭಟನೆಯ ವೇಳೆ ಗಂಭೀರ ಸ್ವರೂಪದ ಹಲ್ಲೆ ನಡೆಸಿರುವ ಬಗ್ಗೆ ಕಾಂಗ್ರೆಸ್ ಆರೋಪಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ನಿನ್ನೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ.

ಇಡಿ ಅಧಿಕಾರಿಗಳು ಟಾರ್ಗೆಟ್ ಮಾಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.ಅದರಲ್ಲಿ ಪಿ. ಚಿದಂಬರಂ ಕೂಡ ಸೇರಿಕೊಂಡಿದ್ದರು.

ಪ್ರತಿಭಟನೆಯ ವೇಳೆ ಪೊಲೀಸರು ತಳ್ಳಿದ್ದರಿಂದ ಚಿದಂಬರಂ ಅವರಿಗೆ ಗಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮೋದಿ ಸರಕಾರ ಅನಾಗರಿಕತೆಯ ಎಲ್ಲ ಮಿತಿಗಳನ್ನು ದಾಟಿದೆ. ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಪೊಲೀಸರು ಹೊಡೆದಿದ್ದಾರೆ. ಕನ್ನಡಕವನ್ನು ನೆಲಕ್ಕೆ ಎಸೆದಿದ್ದಾರೆ. ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್