ಚಿಕ್ಕಮಗಳೂರು; ಜಿಲ್ಲೆಯಲ್ಲಿ ಹಾಡುಹಗಲೇ ಇಬ್ಬರು ಯುವಕರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
ಪ್ರಕಾಶ್(30) ಹಾಗೂ ಪ್ರವೀಣ್(33) ಎಂದು ಮೃತರನ್ನು ಗುರುತಿಸಲಾಗಿದೆ.ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಇವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ.
ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಗುಂಡಿನ ದಾಳಿ ನಡೆಸಿದ ರಮೇಶ್‌ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.