ಈಜಲು ಕೆರೆಗಿಳಿದ ವಿದ್ಯಾರ್ಥಿ ನೀರುಪಾಲು

ಚಿಕ್ಕಮಳೂರು; ಈಜಲು ಕೆರೆಗಿಳಿದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ನಲ್ಲೂರು ಕೆರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಕೋಟೆ ನಿವಾಸಿ ಕೃಷ್ಣಪ್ಪ ಎಂಬವರ ಪುತ್ರ ಹರ್ಷ(20) ಮೃತಪಟ್ಟವರು. ಇವರು ನಗರದ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದರು.

ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಗೆ ಈಜಲು ಹೋಗಿದ್ದು, ಈ ವೇಳೆ ಕೆರೆಯ ಆಳ ಅರಿಯದೆ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಾತ್ರಿ ವೇಳೆ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ‌.

ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್