ಚಿಕ್ಕಮಗಳೂರು; 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಶಾಲಾ ಬಾಲಕಿಯನ್ನು ಮೂಡಿಗೆರೆ ತಾಲೂಕಿನ ಜೋಗಣ್ಣಕೆರೆ ಗ್ರಾಮದ ಅರ್ಜುನ ಮತ್ತು ಸುಮಾ ಎಂಬವರ ಪುತ್ರಿ ಸೃಷ್ಟಿ(14) ಎಂದು ಗುರುತಿಸಲಾಗಿದೆ‌.

ಈ ಬಾಲಕಿ ದಾರದಹಳ್ಳಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದು, ಬೆಳಗ್ಗೆ ಎಂದಿನಂತೆ ಮನೆಯಿಂದ ಶಾಲೆಗೆ ತೆರಳಲು ಬಸ್ ಗೆ ಕಾಯುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.

ಸ್ಥಳೀಯರು ಕೂಡಲೇ ಬಾಲಕಿಯನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಕರೆ ತಂದಿದ್ದು, ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಟಾಪ್ ನ್ಯೂಸ್