ನಂಜನಗೂಡು:ಅಪ್ರಾಪ್ತೆಯನ್ನು ವಿವಾಹವಾದ ಗ್ರಾಮ ಪಂಚಾಯತ್ ಅಧ್ಯಕ್ಷನೋರ್ವನ ವಿರುದ್ಧ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೀಶ್ ಕುಮಾರ್ ಎಂಬವರ ವಿರುದ್ಧ ರೈತ ಸಂಘದ ಉಪಾಧ್ಯಕ್ಷರು ಸೇರಿ ಹಲವರು ನೀಡಿದ ದೂರಿನ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಕವಿತಾ ಕ್ರಮ ಕೈಗೊಂಡಿದ್ದಾರೆ.
ಅಪ್ರಾಪ್ತೆ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷನ ಮದುವೆ 2023ರ ಫೆಬ್ರವರಿ 15ರಲ್ಲಿ ನಡೆದಿದ್ದು, ಇದೀಗಾ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಶಾಲಾ ದಾಖಲಾತಿ ಪ್ರಕಾರ ಬಾಲಕಿಯ ಜನ್ಮ ದಿನಾಂಕವು 2005ರ ಮೇ 19 ಆಗಿದ್ದು ಆಕೆಗೆ ಇನ್ನು 18 ವರ್ಷ ಆಗದ ಹಿನ್ನಲೆಯಲ್ಲಿ ಅಧ್ಯಕ್ಷ ಹರೀಶ್ ಕುಮಾರ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂಜನಗೂಡು ಪೊಲೀಸರು ಈ ಕುರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.