ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ; ಅಮಿತ್ ಶಾ

ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮೇಲೆ ತುಷ್ಟೀಕರಣ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ, ಒಳ ನುಸುಳುವಿಕೆ ವಿಚಾರದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ. ಇಲ್ಲಿ ನೆರದಿರುವ ಜನಸ್ತೋಮವನ್ನು ನೋಡಿದರೆ ಇದು ಬಿಜೆಪಿಯ ಪರ ಜನರ ಒಲವನ್ನು ಸೂಚಿಸುತ್ತದೆ. 2026ರಲ್ಲಿ ರಾಜ್ಯದಲ್ಲಿ ಬಿಜೆಪಿ 3ನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಬಿಜೆಪಿಯ ಸಾಧನೆಯು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಅಡಿಪಾಯವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧವಾಗಲಿದೆ ಎಂದು ಹೇಳಿದ್ದರು.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಮಾಟುವಾ ಸಮುದಾಯದ ಜನರು ವಿಭಜನೆಯ ನಂತರ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ. ಮಾಟುವಾಗಳಿಗೆ ಪೌರತ್ವದ ಹಕ್ಕುಗಳನ್ನು ನೀಡುತ್ತೇವೆ ಎಂದು ಹೇಳಿದ್ದರು.

ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಪ್ರಾಸ್ತವಿತ ಕಾಯ್ದೆಯು ದೇಶದಲ್ಲಿ ಭಾರೀ ಜನ ವಿರೋಧಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್