ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಶೋಕ್ ರೈಗೆ ಮುನ್ನಡೆಯಾಗಿದೆ.ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾಗೆ ಮುನ್ನಡೆಯಾಗಿದೆ.
ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ.
ಸಿಟಿ ರವಿಗೆ ಚಿಕ್ಕಮಗಳೂರಿನಲ್ಲಿ ಭಾರೀ ಹಿನ್ನೆಡೆಯಾಗಿದೆ.ಕಾಂಗ್ರೆಸ್ ನ ತಮ್ಮಯ ಮುಂದುವರಿಕೆ ಮುಂದುವರಿದಿದೆ.ಗಾಂಧಿನಗರದಲ್ಲಿ ದಿನೇಶ್ ಗುಂಡೂರಾವ್ ಗೆ ಹಿನ್ನೆಡೆಯಾಗಿದೆ.
ಈಗ 115 ಕ್ಷೇತ್ರಗಳ್ಲಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ, 24 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ.