ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ನ್ಯಾಯಾಂಗ ಬಂಧನ; ರಾಜಮಂಡ್ರಿ ಕಾರಾಗೃಹದ ಸುತ್ತ ಭದ್ರತೆ ಹೆಚ್ಚಳ

ಕೌಶಲ್ಯಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಶನಿವಾರ ಬಂಧಿಸಿದೆ.

ಮಾಜಿ ಮುಖ್ಯಮಂತ್ರಿ ನಾಯ್ಡು ಅವರು 14 ದಿನಗಳ ಕಾಲ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲಿನ ಸುತ್ತ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಸೆಪ್ಟೆಂಬರ್ 8 ಮಧ್ಯಾಹ್ನ 3.40ಕ್ಕೆ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ವಿಜಯವಾಡದ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಕ್ಕೂ ಮುನ್ನ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.ಎನ್ ಚಂದ್ರಬಾಬು ನಾಯ್ಡು ವಿಚಾರಣೆ ವೇಳೆ ಸಹಕರಿಸಿಲ್ಲ ಎಂದು ಸಿಐಡಿ ಹೇಳಿದೆ.

ಟಿಡಿಪಿ ಈ ಕುರಿತು ಟ್ವೀಟ್ ಮಾಡಿದ್ದು, ನಾಯ್ಡು ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಜನರು ಅವರ ಜೊತೆಗಿದ್ದಾರೆ ಎಂದು ಹೇಳಿದೆ.

ಟಾಪ್ ನ್ಯೂಸ್