5 ಗ್ಯಾರೆಂಟಿ ಯೋಜನೆ ಜಾರಿಗೆ ಬರೊಬ್ಬರಿ ಎಷ್ಟು ಸಾವಿರ ಕೋಟಿ ವೆಚ್ಚವಾಗಲಿದೆ ಗೊತ್ತಾ? ಸಿಎಂ ಕೊಟ್ಟ ಲೆಕ್ಕಾಚಾರ ಇಲ್ಲಿದೆ…

ಬೆಂಗಳೂರು;ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳ
ಜಾರಿಯನ್ನು ಘೋಷಣೆ ಮಾಡಿದೆ.ಇದಕ್ಕೆ ಬರೊಬ್ಬರಿ
59,000 ಕೋಟಿ ರೂ.ವಾರ್ಷಿಕ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ.
ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ.
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರೆಂಟಿ ಜಾರಿ ಬಗ್ಗೆ ಘೋಷಣೆ ಮಾಡಿತ್ತು.ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್, ಗೃಹ ಲಕ್ಷ್ಮೀ ಯೋಜನೆಯಡಿ 2000 ರೂ ಮಹಿಳೆಯರಿಗೆ ನಗದು, ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಘೋಷಿಸಲಾಗಿತ್ತು.

ಅನ್ನಭಾಗ್ಯ ಯೊಜನೆಯಡಿ ಕುಟುಂಬದ ಪ್ರತಿಯೊಬ್ಬರಿಗೂ 10 ಕೆಜಿ ಉಚಿತ ಅಕ್ಕಿ, ಯುವನಿಧಿ ಯೋಜನೆಯಡಿ 2023 ರಲ್ಲಿ ಪದವಿ ಪಾಸ್ ಮಾಡಿದವರಿಗೆ 24 ತಿಂಗಳು ಪ್ರತಿ ತಿಂಗಳು 3000, ಡಿಪ್ಲೋಮದಾರರಿಗೆ 1500 ರು ಭತ್ಯೆ ನೀಡುವ ಭರವಸೆ ನೀಡಿತ್ತು.

ಈ ಕುರಿತು ಎಲ್ಲಾ ಗ್ಯಾರೆಂಟಿಗಳಿಗೆ ಸಂಪುಟದಿಂದ ಅನುಮೋದನೆ ದೊರೆತು ಜಾರಿ ಘೋಷಿಸಲಾಗಿದೆ. ಯೋಜನೆಗಳಿಗೆ ಷರತ್ತು ವಿಧಿಸಿ ತಾಂತ್ರಿಕ ಪ್ರಕ್ರಿಯೆ ನಡೆಯುತ್ತಿದೆ.

ಟಾಪ್ ನ್ಯೂಸ್