ಹಿಜಾಬ್, ಹಲಾಲ್ ವಿಷಯವೆಲ್ಲ ಜನರು ಮರೆತಿದ್ದಾರೆ- ಸಿಎಂ ಬೊಮ್ಮಯಿ, ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಸಿಎಂ ಏನೆಲ್ಲಾ ಹೇಳಿದ್ರು?

ಬೆಂಗಳೂರು;ಹಿಜಾಬ್, ಹಲಾಲ್ ಚುನಾವಣಾ ವಿಷಯವೇ ಅಲ್ಲ.ಈಗ ಎಲ್ಲವೂ ಮುಗಿದು ಹೊಗಿದೆ ಎಂದು ಸಿಎಂ ಬಸವರಾಜ ಬೊಮ್ಮಯಿ ಹೇಳಿಕೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೆ ಕಾಂಕ್ಲೇವ್‍ನಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಿಜಾಬ್, ಹಲಾಲ್ ವಿಷಯವನ್ನು ರಾಜ್ಯದ ಜನರೇ ಮರೆತಿದ್ದಾರೆ. ಕರ್ನಾಟಕದಲ್ಲಿ ಎಲ್ಲ ಸಮುದಾಯಗಳು ಸೌಹಾರ್ದತೆಯಿಂದ ಇವೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯದ ನಾಡಿಮಿಡಿತವನ್ನು ಅರಿತಿದ್ದು, ಬಿಜೆಪಿ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ.ಮೂವತ್ತು ವರ್ಷದಿಂದ ರಾಜಕಾರಣದಲ್ಲಿದ್ದು, ಸಣ್ಣ-ಪುಟ್ಟ ಚುನಾವಣೆಗಳನ್ನು ಎದುರಿಸಿದ್ದೇನೆ. ಮೇ 13ಕ್ಕೆ ಎಲ್ಲರೂ ನಮಗೆ ಅಭಿನಂದನೆ ಸಲ್ಲಿಸುತ್ತಾರೆ. ಕೋವಿಡ್ ಸಂದರ್ಭದಿಂದ ಹಿಡಿದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಹೀಗಾಗಿ ನಮಗೆ ಆತ್ಮವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಇತ್ತೀಚೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶಿಕಾರಿಪುರದಲ್ಲಿ ಟಿಪ್ಪು, ಸಾವರ್ಕರ್, ಹಿಜಾಬ್, ಹಲಾಲ್ ಇಂತಹ ವಿಷಯಗಳ ವಿವಾದಗಳನ್ನು ನಾನು ಬೆಂಬಲಿಸಲು ಹೋಗುವುದಿಲ್ಲ. ಪಕ್ಷದ ಇತರ ನಾಯಕರು ಇಂತಹ ಸಮಸ್ಯೆಗಳನ್ನು ಬೆಂಬಲಿಸಿದರೆ ಅದು ಸರಿಯಲ್ಲ ಎಂದು ಹೇಳಿದ್ದರು.ಆದರೆ ಈ ವಿಚಾರಗಳು ಚರ್ಚೆಯಲ್ಲಿರುವ ಸಂದರ್ಭದಲ್ಲಿ ಮೌನವಾಗಿದ್ದು, ಬಿಎಸ್ ವೈ ಈಗ ಬಾಯ್ಬಿಟ್ಟಿದ್ದು ಜನರಿಂದ ಟೀಕೆಗೆ ಗುರಿಯಾಗಿದ್ದರು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com