ಸಂಘಪರಿವಾರದ ಸುಳ್ಳು ಕಾರ್ಖಾನೆಯ ಉತ್ಪನ್ನವಾಗಿದೆ – ‘ದಿ ಕೇರಳ ಸ್ಟೋರಿ” ಬಗ್ಗೆ ಪ್ರತಿಕ್ರಿಯಿಸಿ ಸಿಎಂ ಪಿಣರಾಯ್ ವಿಜಯನ್ ಹೇಳಿದ್ದೇನು ಗೊತ್ತಾ?

ತಿರುವನಂತಪುರಂ: ಹಿಂದಿ ಚಿತ್ರ ‘ದಿ ಕೇರಳ ಸ್ಟೋರಿ’ ವಿರುದ್ಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಇದು ಕೇರಳದಲ್ಲಿ ಕೋಮುವಾದವನ್ನು ಹುಟ್ಟುಹಾಕಲು ಮತ್ತು ರಾಕ್ಷಸೀಕರಿಸಲು ಮಾಡಿರುವ ಸಂಘಪರಿವಾರದ ಪ್ರಚಾರದ ಸಿನಿಮಾ ಎಂದು ಹೇಳಿದ್ದಾರೆ.

ಈ ಚಿತ್ರವು ಸಂಘಪರಿವಾರದ ಸುಳ್ಳು ಕಾರ್ಖಾನೆಯ ಉತ್ಪನ್ನವಾಗಿದೆ ಎಂದು ಪಿಣರಾಯಿ ವಿಜಯನ್ ಭಾನುವಾರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೇರಳದಂತಹ ರಾಜಿಯಿಲ್ಲದ ಜಾತ್ಯತೀತ ಭೂಮಿಯನ್ನು ಅಶಾಂತಿಯ ತಾಣವನ್ನಾಗಿ ಮಾಡುವ ಸಂಘಪರಿವಾರದ ಸಂಚನ್ನು ಚಲನಚಿತ್ರವು ಕೈಗೆತ್ತಿಕೊಂಡಿದೆ ಎಂದು ಎಂದು ಮುಖ್ಯಮಂತ್ರಿ ಹೇಳಿದರು.

ಚಿತ್ರದ ಟ್ರೇಲರ್ ನಲ್ಲಿ 32,000 ಮಹಿಳೆಯರು ಮತಾಂತರಗೊಂಡು ಇಸ್ಲಾಮಿಕ್ ಸ್ಟೇಟ್ ಸದಸ್ಯರಾಗಿದ್ದಾರೆ ಎಂಬ ಸುಳ್ಳನ್ನು ತೋರಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಟೀಕಿಸಿದರು. ಇದು ಬೋಗಸ್ ಕಥೆ, ಕೇರಳದಲ್ಲಿ ಧಾರ್ಮಿಕ ಸಾಮರಸ್ಯದ ವಾತಾವರಣ ಹಾಳು ಮಾಡಿ ಕೋಮುವಾದದ ವಿಷಬೀಜ ಬಿತ್ತಲು ಸಂಘಪರಿವಾರ ಯತ್ನಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ, ಸುಳ್ಳು ಪ್ರಚಾರದ ಮೂಲಕ ಸಮಾಜದಲ್ಲಿ ಅಶಾಂತಿ ಹರಡುವ ಕೋಮುವಾದಿ ಪ್ರಯತ್ನಗಳ ವಿರುದ್ಧ ಎಲ್ಲರೂ ಜಾಗೃತರಾಗುವಂತೆ ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ.

ಮೇ 5 ರಂದು ಬಿಡುಗಡೆಯಾಗಲಿರುವ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರವು ನೂರಾರು ಕೇರಳದ ಹುಡುಗಿಯರ ಕಥೆ ಎಂದು ಹೇಳಲಾಗುತ್ತದೆ ಎಂದು ಹೇಳಲಾಗಿದೆ.ಹಿಂದೂಗಳ, ಬ್ರೈನ್ ವಾಶ್ ಮಾಡಿ, ಮತಾಂತರಮಾಡಿ, ಐಎಸ್‌ಗೆ ಸೇರ್ಪಡೆಗೊಂಡರು ಮತ್ತು ಅಫ್ಘಾನಿಸ್ತಾನ ಮತ್ತು ಸಿರಿಯಾದಂತಹ ಸ್ಥಳಗಳಿಗೆ ಕೊಂಡೊಯ್ಯಲಾಯಿತು ಮತ್ತು ಅಲ್ಲಿ ಐಎಸ್ ಯುದ್ಧವನ್ನು ನಡೆಸುತ್ತಿದೆ ಎಂದು ಚಿತ್ರದಲ್ಲಿ ಹೇಳಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com