ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ, ಶಾಸಕಾಂಗ ಪಕ್ಷದ ಸಭೆ ಅಂತ್ಯ, ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು:ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಆಯ್ಕೆ ಜವಾಬ್ದಾರಿ ಹೈಕಮಾಂಡ್ ಹೆಗಲಿಗೆ ಬಿದ್ದಿದೆ ಎನ್ನಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಿಎಂ ರೇಸ್ ನಲ್ಲಿದ್ದು ಸಭೆಯಲ್ಲಿ ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಶಾಸಕರ ಮತ ಸಂಗ್ರಹಕ್ಕೆ ಡಿಕೆ ಶಿವಕುಮಾರ್ ಒಪ್ಪಲಿಲ್ಲ. ಅಧಿಕಾರ ಹಂಚಿಕೆ ಸೂತ್ರಕ್ಕೂ ಅವರು ಒಪ್ಪಲಿಲ್ಲ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಹುದ್ದೆಗೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ.

ಇದಲ್ಲದೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ.ಉಳಿದಿದ್ದನ್ನು ಹೈಕಮಾಂಡ್​ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.

ಎಐಸಿಸಿ ವೀಕ್ಷಕರಾದ ಆಗಮಿಸಿರುವ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ, ಪ್ರಧಾನ ಕಾರ್ಯದರ್ಶಿ ಜಿತೇಂದರ್ ಸಿಂಗ್, ಎಐಸಿಸಿಯ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಾಬರಿಯಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com