ಬೆಂಗಳೂರು;ರಾಜ್ಯದ ಸಿಎಂ ಆಯ್ಕೆ ಕಸರತ್ತು ದೆಹಲಿಯಲ್ಲಿ ಮುಂದುವರಿದಿದೆ.ಇಂದು ಸಿಎಂ ಬಗ್ಗೆ ಅದೀಕೃತವಾಗಿ ಘೋಷಣೆ ಸಾಧ್ಯತೆ ಇದೆ.ಆದರೆ ನಿನ್ನೆ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹೈಕಮಾಂಡ್ ನೇಮಕ ಮಾಡಿದೆ ಎಂದು ಭಾರಿ ಸುದ್ದಿಯಾಗಿತ್ತು.
ಈ ಬಗ್ಗೆ ಗರಂ ಆದ ಕಾಂಗ್ರೆಸ್ ಹೈಕಮಾಂಡ್, ಅಧಿಕೃತ ನಿರ್ಧಾರಕ್ಕೂ ಮೊದಲೇ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲಾಗುವುದು ಎಂದು ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದ ಕೆಲವು ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.ಈ ರೀತಿಯ ಹೇಳಿಕೆಗಳನ್ನು ನೀಡಿದ್ದಕ್ಕೆ ವಿವರ ಕೇಳುವುದಾಗಿ ಹೇಳಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹಾಗೂ ಅಶೋಕ್ ಪಟ್ಟಣ್ಗೆ ನೋಟಿಸ್ ನೀಡುವಂತೆ ಸುರ್ಜೇವಾಲ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಸಿಎಂ ಸುದ್ದಿಗೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಖರ್ಗೆ ಬಳಿ ವಿಚಾರ ಪ್ರಸ್ತಾಪಿಸಿದ್ದ ಅವರು, ಅಧಿಕೃತ ಘೋಷಣೆಗೂ ಮುನ್ನವೇ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಹೇಳಿದ್ದರು.