ಬೆಂಗಳೂರು; ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ.ಎರಡನೇ ಬಾರಿಗೆ ಸಿದ್ದರಾಮಯ್ಯ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗಿದೆ.
ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿಯವರೇ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕುಮಾರಕೃಪಾ ಬಳಿ ಇರುವ ಸಿದ್ದರಾಮಯ್ಯ ನಿವಾಸದ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಒಂದು ಕೆಎಸ್ ಆರ್ ಪಿ ವಾಹನ ಸೇರಿ 70 ಕ್ಕೂ ಹೆಚ್ಚು ಮಂದಿಯನ್ನು ನಿಯೋಜನೆ ಮಾಡಲಾಗಿದೆ.ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡುತ್ತಿರುವ ಹಿನ್ನೆಲೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಬೆಂಗಳೂರಿನ ಹಲವು ಕಡೆ ಸಿದ್ದರಾಮಯ್ಯ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.