BIG NEWS; ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಪತಿ, ಸ್ಥಳದಲ್ಲಿ ಥಳಿತ

ತಮಿಳುನಾಡು; ಕೋರ್ಟಿನ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ನಡೆದಿದೆ.

ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ.

ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕವಿತಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಪತಿ ಶಿವಕುಮಾರ್ ಆಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಕಪಕ್ಕದಲ್ಲಿದ್ದ ಕೆಲವು ವಕೀಲರು ಶಿವಕುಮಾರ್ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಕವಿತಾ ಹಾಗೂ ವಕೀಲರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಯ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ‌.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com