ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೊಡಗು;ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ನಡೆದಿದೆ.

ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು.

ಮಂಗಳವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್