ಮಂಗಳೂರು; ಮಕ್ಕಳಿಗೆ ವಾಹನ ಕೊಟ್ಟು ಅಪಘಾತವಾದರೆ ಪೋಷಕರ ಮೇಲೆ ಕೇಸ್

ಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

ದ್ವಿಚಕ್ರ ವಾಹನ ಅಪಘಾತಗಳ ಬಗ್ಗೆ ನಿನ್ನೆ ನಡೆದ ನಗರ ಪೊಲೀಸ್ ಕಮೀಷನರ್ ಅವರ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಈ ಬಗ್ಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರು, ಇನ್ನು ಮುಂದೆ ಮಕ್ಕಳು ದ್ವಿಚಕ್ರ ಚಲಾಯಿಸಿ ಅಪಘಾತ ನಡೆಸಿದರೆ ಮಕ್ಕಳ ಹೆತ್ತವರ ವಿರುದ್ಧವೇ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ರೀತಿ ಘಟನೆ ನಡೆದರೆ ಆರ್‌ಸಿ ಓನರ್ ವಿರುದ್ಧ ಕೂಡ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದು, ಈ ಬಗ್ಗೆ ಮಕ್ಕಳ ಹೆತ್ತವರಿಗೆ ಕೂಡ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ