ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚನೆ ಮಾಡಲಾಗಿದ್ದು, ಸದಸ್ಯರ ಪಟ್ಟಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ದಾರೆ.
39 ಸದಸ್ಯರುಳ್ಳ ಪಟ್ಟಿಯಲ್ಲಿ ಕರ್ನಾಟಕದಿಂದ ಮಲ್ಲಿಕಾರ್ಜನ ಖರ್ಗೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೈನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಸ್ಥಾನ ನೀಡಲಾಗಿದೆ.
ಇದಲ್ಲದೆ ಕರ್ನಾಟಕದ ಮೂಲದವರಾದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ಅವರಿಗೂ ಸ್ಥಾನ ನೀಡಲಾಗಿದೆ.
ಸಿಡಬ್ಲ್ಯುಸಿ ಸದಸ್ಯರ ಪಟ್ಟಿಯಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಡಾ. ಮನಮೋಹನ್ ಸಿಂಗ್, ಎಕೆ ಆಂಟನಿ, ದಿಗ್ವಿಜಯ್ ಸಿಂಗ್, ಅಂಬಿಕಾ ಸೋನಿ, ರಾಹುಲ್ ಗಾಂಧಿ, ಸಚಿನ್ ಪೈಲಟ್, ಶಶಿ ತರೂರ್, ನಾಸೀರ್ ಹುಸೇನ್, ಅಲ್ಕಾ ಲಂಬಾ, ಸುಪ್ರಿಯಾ, ಪ್ರಣಿತಿ ಶಿಂಧೆ, ಪವನ್ ಖೇರಾ, ಗಣೇಶ್ ಗೋಡಿಯಾಲ್, ಯಶೋಮತಿ ಠಾಕೂರ್ ಅವರು ಕೂಡ ಸ್ಥಾನ ಪಡೆದಿದ್ದಾರೆ.
ಸಮಿತಿಯು 39 ಸಾಮಾನ್ಯ ಸದಸ್ಯರನ್ನು ಒಳಗೊಂಡಿದ್ದು, ಇದರಲ್ಲಿ ಕೆಲವು ರಾಜ್ಯದ ಉಸ್ತುವಾರಿಗಳು ಮತ್ತು 13 ವಿಶೇಷ ಆಹ್ವಾನಿತರು ಸೇರಿದ್ದಾರೆ. ಈ ಪಟ್ಟಿಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷರು, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಮತ್ತು ಸೇವಾದಳದ ಅಧ್ಯಕ್ಷರು ಸೇರಿದ್ದಾರೆ.
ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದ ಕಾಂಗ್ರೆಸ್ನ 85ನೇ ಸರ್ವಸದಸ್ಯ ಅಧಿವೇಶನದ ಅಂಗವಾಗಿ ಫೆಬ್ರವರಿಯಲ್ಲಿ ನಡೆದ ಕಾಂಗ್ರೆಸ್ ಚಾಲನಾ ಸಮಿತಿ ಸಭೆಯು ಸಿಡಬ್ಲ್ಯುಸಿಗೆ ಸದಸ್ಯರ ನೇಮಕಕ್ಕೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮನಿರ್ದೇಶನ ಮಾಡಲು ಅಧಿಕಾರವನ್ನು ನೀಡಿತ್ತು.