ಬೆಂಗಳೂರು;ಕಾಂಗ್ರೆಸ್ ಪಕ್ಷದ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಲಾಗಿದೆ.
ಪಟ್ಟಿಯಲ್ಲಿ ನಾಲ್ಕು ತಂದೆ-ಮಕ್ಕಳ ಜೋಡಿಗಳಿಗೆ ಟಿಕೆಟ್ ಘೋಷಿಸಲಾಗಿದೆ.
124 ಕ್ಷೇತ್ರಗಳ ಪೈಕಿ ಒಟ್ಟು ಎಂಟು ಕ್ಷೇತ್ರಗಳಲ್ಲಿ ತಂದೆ-ಮಕ್ಕಳು ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ.
ಬಿಟಿಎಂ ಬಡಾವಣೆ ಕ್ಷೇತ್ರದಿಂದ ರಾಮಲಿಂಗಾರೆಡ್ಡಿ ಹಾಗೂ ಜಯನಗರ ಕ್ಷೇತ್ರದಿಂದ ಪುತ್ರಿ ಸೌಮ್ಯಾರೆಡ್ಡಿ ಅವರಿಗೆ ಮತ್ತೊಮ್ಮೆ ಟಿಕೆಟ್ ಘೋಷಿಸಲಾಗಿದೆ.
ವಿಜಯನಗರ ಕ್ಷೇತ್ರದಿಂದ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ಕ್ಷೇತ್ರದಿಂದ ಪುತ್ರ ಪ್ರಿಯಕೃಷ್ಣ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಿಂದ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಕಣಕ್ಕಿಳಿಯಲಿದ್ದಾರೆ.
ಈವರೆಗೆ ಲೋಕಸಭೆಗೆ ಸ್ಪರ್ಧಿಸುತ್ತಿದ್ದ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕೆಜಿಎಫ್‌ನಿಂದ ಪುತ್ರ ರೂಪಕಲಾ ಶಶಿಧರ್ ಕಣಕ್ಕಿಳಿಯುತ್ತಿದ್ದಾರೆ.