ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ; ಕುತೂಹಲ ಮೂಡಿಸಿದ್ದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು:ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಮಂಗಳವಾರ ಬಿಡುಗಡೆ ಮಾಡಿದ್ದು 7 ಕ್ಷೇತ್ರಗಳಿಗೆ ಸ್ಪರ್ಧಿಗಳನ್ನು‌ ಘೋಷಿಸಿದೆ.

ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ.ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರಕ್ಕೆ ಮುಹಮ್ಮದ್ ಯೂಸುಫ್ ಸವಣೂರು ಹೆಸರು ಘೋಷಣೆ ಮಾಡಲಾಗಿದೆ.

ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ.ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್‌ ಮಾಡಿತ್ತು. ಕಳೆದ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಅಭ್ಯರ್ಥಿಗಳಿಗೆ ಎಐಸಿಸಿ ಟಿಕೆಟ್‌ ನೀಡಿದೆ. ಮಂಗಳವಾರ ಮತ್ತೆ ಏಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ..

ಹುಬ್ಬಳ್ಳಿ -ಧಾರವಾಡ ಕೇಂದ್ರ- ಜಗದೀಶ್ ಶೆಟ್ಟರ್

ಶಿಗ್ಗಾಂವಿ- ಮುಹಮ್ಮದ್ ಯೂಸುಫ್

ಹುಬ್ಬಳ್ಳಿ -ಧಾರವಾಡ ಪಶ್ಚಿಮ- ಪ್ರದೀಪ್ ಚಿಂಚೋರೆ

ಹರಿಹರ- ನಂದಗವಿ ಶ್ರೀನಿವಾಸ್

ಚಿಕ್ಕಮಗಳೂರು- ಎಚ್. ಡಿ ತಮ್ಮಯ್ಯ

ಶ್ರವಣಬೆಳಗೂಳ- ಎಂ.ಗೋಪಾಲಸ್ವಾಮಿ

ಲಿಂಗಸುಗೂರು- ದುರ್ಗಪ್ಪ ಎಸ್.ಹೊಳಗೇರಿ

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com