ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಗೆ 2000ರೂ.ನೀಡುವುದಾಗಿ ಘೋಷಣೆ

ಬೆಂಗಳೂರು;ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ನೆರವು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಸಲ್ಲಿಸಲಾಗಿದೆ.

ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆ.
ರಾಜ್ಯದ ಮಹಿಳೆಯರೇ, ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ಮುಂದೆ ಕಾಂಗ್ರೆಸ್ ಹೊಣೆ!ಎಂದು ಇದೇ ವೇಳೆ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಟಾಪ್ ನ್ಯೂಸ್