ಬೆಂಗಳೂರು;ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭೂತಪೂರ್ವ ಗೆಲುವಿನ ಬಳಿಕ ಕಾಂಗ್ರೆಸ್ ನ ಗ್ಯಾರೆಂಟಿಗಳೇ ಹೆಚ್ಚು ಚರ್ಚೆಯಾಗಿದ್ದವು.
ಇದೀವ ಕಾಂಗ್ರೆಸ್ ನ ‘ಗ್ಯಾರಂಟಿ’ಗಳಿಗೆ ಷರತ್ತುಗಳನ್ನು ವಿಧಿಸಲಾಗುವುದು’ ಎಂದು ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಗ್ಯಾರೆಂಟಿಗಳನ್ನು ಸುಮ್ಮನೆ ಎಲ್ಲರಿಗೂ ಉಚಿತವಾಗಿ ಕೊಡಲು ಆಗುವುದಿಲ್ಲ. ಅದಕ್ಕೆ ಷರತ್ತುಗಳು ಇರಲಿವೆ, ಆಯಾ ಇಲಾಖೆ ಸಚಿವರ ಜೊತೆ ಚರ್ಚೆ ಮಾಡಿ ಅದನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಅದನ್ನು ಮೊದಲ ಕ್ಯಾಬಿನೆಟ್ ನಲ್ಲೇ ಈಡೇರಿಸುವ ಭರವಸೆ ಕೊಟ್ಟಿದ್ದೇವೆ, ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ ಎಂದು ಅವರು ಹೇಳಿದ್ದಾರೆ.
ಗ್ಯಾರಂಟಿಗಳನ್ನು ಪ್ರಾಕ್ಟಿಕಲ್ ಆಗಿ ವರ್ಕ್ ಮಾಡಿ ಜಾರಿ ಮಾಡುತ್ತೇವೆ.ಗ್ಯಾರೆಂಟಿಗಳಿಗೆ ಮಾನದಂಡ ಇರುತ್ತದೆ ಎಂದು ಹೇಳಿದರು.