ನವದೆಹಲಿ:ಅಖಿಲ ಭಾರತೀಯ ಕಾಂಗ್ರೆಸ್ ನ ಪೂರ್ಣಾವಧಿ ಅಧ್ಯಕ್ಷರ ಆಯ್ಕೆಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.ಅಕ್ಟೋಬರ್ 17ರಂದು ಮತದಾನ ನಡೆಯಲಿದ್ದು,ಅಕ್ಟೋಬರ್ 19ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ.
ಎಐಸಿಸಿಸಿಯ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿಯನ್ನು ನೇಮಕಮಾಡಲಾಗಿತ್ತು.ಈ ಹುದ್ದೆಗೆ ಈಗ ಚುನಾವಣೆಯ ಮೂಲಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗಾಗಿ ದಿನಾಂಕವನ್ನು ನಿಗದಿ ಪಡಿಸಲಾಗಿದೆ.
ಸೆ.24ರಿಂದ ಅಧ್ಯಕ್ಷರ ಹುದ್ದೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. ಈ ಬಗ್ಗೆ ಆಂತರಿಕ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.