BIG NEWS ಕರ್ನಾಟಕದ ಸರಕಾರಿ ಶಾಲೆಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಕಡಿವಾಣ? ಕಾಂಗ್ರೆಸ್ ಮಹತ್ವದ ಟ್ವೀಟ್, ಟ್ವೀಟ್ ನಲ್ಲಿ ಏನೇನಿದೆ?ಇಲ್ಲಿದೆ ಮಾಹಿತಿ…

ಬೆಂಗಳೂರು;ಕೇರಳದಲ್ಲಿ ಇತ್ತೀಚೆಗೆ ದೇವಸ್ಥಾನಗಳಲ್ಲಿ ಆರೆಸ್ಸೆಸ್ ಚಟುವಟಿಕೆ, ಶಸ್ತ್ರಾಸ್ತ್ರ ತರಭೇತಿ‌ ನಿಷೇಧಿಸಿ ಸರಕಾರ ಆದೇಶ ಹೊರಡಿಸಿತ್ತು.‌ಇದರ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ನಿರ್ಧಾರದ ಬಗ್ಗೆ ವಿಮರ್ಶಿಸಲು ಮುಂದಾಗಿದೆ.

ರಾಜ್ಯದಲ್ಲಿ ಶಾಂತಿ ಕದಡಿದರೆ ಆರೆಸ್ಸೆಸ್, ಬಜರಂಗದಳ ಎಂದು ನೋಡದೆ ಮುಲಾಜಿಲ್ಲದೆ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ನಾಯಕ ಪ್ರಿಯಾಂಕ‌ ಖರ್ಗೆ ಹೇಳಿದ್ದರು. ಇದರ ಬೆನ್ನಲೆ ಬಿಜೆಪಿ ಇದಕ್ಕೆ ಪ್ರತಿಕ್ರಿಯಿಸಿದೆ.

ಆರೆಸ್ಸೆಸ್ ನಿಷೇಧಕ್ಕೆ ಕೈಹಾಕಿದರೆ ಕಾಂಗ್ರೆಸ್ ಇರಲ್ಲ’ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ‘ಭಾರತದಲ್ಲಿ ಆರೆಸ್ಸೆಸ್ ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು ಎಂದು ಹೇಳಿದೆ.

ಕಾಂಗ್ರೆಸ್ ಮಹತ್ವದ ಟ್ವೀಟ್ ವೊಂದರಲ್ಲಿ ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು.ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು.
ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ ಎಂದು ಹೇಳಿದೆ.

ಇದಲ್ಲದೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು‌ ಎಂದು‌ ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲೇ ಶಾಂತಿ‌ ಕದಡುವ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು,ಈ ವೇಳೆ ಕೂಡ ಚರ್ಚೆಗೆ ಗ್ರಾಸವಾಗಿತ್ತು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com