ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಟ್ಟ ಮಾತಿನಂತೆ ನಡೆಯುತ್ತೇವೆ, ತಪ್ಪಿದರೆ ರಾಜಕೀಯ ನಿವೃತಿ ಪಡೆಯುತ್ತೇನೆ- ಸಿದ್ದರಾಮಯ್ಯ

ಹಾಸನ; ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಮಾಜಿ ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.

ಕುಟುಂಬದ ಮಹಿಳೆಯರಿಗೆ 2000 ರೂಪಾಯಿ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.

ಟಾಪ್ ನ್ಯೂಸ್