ಗುಜರಾತ್; ಗೋಧ್ರೋತ್ತರ ಗಲಭೆ ವೇಳೆ 17 ಮಂದಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದ 22 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ!

ಗುಜರಾತ್‌; ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯವು ರಾಜ್ಯದಲ್ಲಿ 2002 ರ ಗೋಧ್ರಾ ನಂತರದ ಕೋಮು ಗಲಭೆ ವೇಳೆ ನಡೆದ ಘಟನೆಯ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 17 ಸದಸ್ಯರನ್ನು ಕೊಂದ 22 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಫೆಬ್ರವರಿ 28, 2002 ರಂದು ಈ ಘಟನೆ ನಡೆದಿದೆ ಮತ್ತು ಸಾಕ್ಷ್ಯವನ್ನು ನಾಶಪಡಿಸುವ ಉದ್ದೇಶದಿಂದ ಅವರ ದೇಹಗಳನ್ನು ಸುಡಲಾಯಿತು.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಷ್ ತ್ರಿವೇದಿ ಅವರ ನ್ಯಾಯಾಲಯವು ಮಂಗಳವಾರ ಎಲ್ಲಾ 22 ಆರೋಪಿಗಳನ್ನು ಖುಲಾಸೆಗೊಳಿಸಿದೆ, ಅವರಲ್ಲಿ ಎಂಟು ಮಂದಿ ಪ್ರಕರಣದ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ರತಿವಾದಿ ವಕೀಲ ಗೋಪಾಲಸಿನ್ಹ್ ಸೋಲಂಕಿ ಹೇಳಿದ್ದಾರೆ.

2002ರಲ್ಲಿ 59 ಮಂದಿಯ ಸಾವಿಗೆ ಕಾರಣವಾದ ಸಾಬರಮತಿ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಬಳಿಕ ಕೋಮುಗಲಭೆಗಳು ಸಂಭವಿಸಿದ್ದವು. ಘಟನೆಯ ಮರುದಿನ ಗೋದ್ರಾದಿಂದ 30 ಕಿಲೋಮೀಟರ್ ದೂರದ ಕಲೋಲ್ ಪಟ್ಟಣದ ದೆಲ್ವೋನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 17 ಮಂದಿ ಜೀವಂತ ದಹನವಾಗಿದ್ದರು.

ಟಾಪ್ ನ್ಯೂಸ್