1 ವರ್ಷದ ಮಗುವನ್ನು ಏಕಾಂಗಿಯಾಗಿ ಮನೆಯಲ್ಲಿ ಬಿಟ್ಟು 10 ದಿನ ಟ್ರಿಪ್ ಹೋದ ತಾಯಿ; ಪ್ರಕರಣ ದಾಖಲು

ತಾಯಿಯೊಬ್ಬಳು 16 ತಿಂಗಳ ಮಗುವನ್ನು ಏಕಾಂಗಿಯಾಗಿ ಮನೆಯಲ್ಲಿ ಬಿಟ್ಟು 10 ದಿನಗಳ ಪ್ರವಾಸಕ್ಕೆ ತೆರಳಿರುವ ಆಘಾತಕಾರಿ ಸಂಗತಿ ಬಯಲಾಗಿದೆ.

ಆಕೆ ವಾಪಸ್ ಬರುವಷ್ಟರೊಳಗೆ ಹೆಣ್ಣು ಮಗು ಡಿಹೈಡ್ರೇಷನ್​ನಿಂದ ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ವರದಿಯಾಗಿದೆ.

ಅಮೆರಿಕಾದ ಓಹಿಯೋದ ಕ್ರಿಸ್ಟಲ್ ಎ.ಕ್ಯಾಂಡೆಲಾರಿಯೊ ತನ್ನ ಹೆಣ್ಣು ಮಗು ಜೈಲಿನ್ ನ್ನು 10 ದಿನಗಳ ಕಾಲ ಮನೆಯಲ್ಲಿ ಒಬ್ಬಂಟಿಯಾಗಿ ಬಿಟ್ಟಿದ್ದಳು.ತನ್ನ ಮಗುವನ್ನು ನೋಡಿಕೊಳ್ಳಿ ಎಂದು ಪಕ್ಕದ ಮನೆಯವರನ್ನು ಕೇಳಿಕೊಂಡಿದ್ದಳು.

ಮಗುವನ್ನು ನೋಡಿಕೊಳ್ಳಿ ಎಂದಿದ್ದಳು ಆದರೆ ಮತ್ತೆ ಅವಳು ಯಾರಿಗೂ ಕರೆ ಮಾಡಲಿಲ್ಲ, ಆದ್ದರಿಂದ ಮಗುವನ್ನು ಆಕೆ ಕರೆದುಕೊಂಡು ಹೋಗಿರಬಹುದು ಎಂದು ಎಲ್ಲರೂ ಸುಮ್ಮನಿದ್ದರು.ಆದರೆ ಮನೆಯಲ್ಲಿ ಹೊಟ್ಟೆಗೆ ಏನೂ ಇಲ್ಲದೆ ಮಗು ಮೃತಪಟ್ಟಿದೆ.

ಜೂನ್ 16 ರಂದು ಪೊಲೀಸರು ಜೆಲಿನ್ ಅವರ ಮನೆಗೆ ತಲುಪಿದಾಗ ಅಲ್ಲಿ ಮಗು ಶವವಾಗಿ ಪತ್ತೆಯಾಗಿದೆ. ಕೊಳಕು ಹೊದಿಕೆಯ ಮೇಲೆ ಮಗು ಮಲಗಿರುವುದು ಕಂಡುಬಂದಿದೆ ಎಂದು ಪೊಲೀಸರು ವಿಚಾರಣೆಯ ಸಮಯದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ತಾಯಿ ಕ್ರಿಸ್ಟಲ್ ಕ್ಯಾಂಡೆಲಾರಿಯೊ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ