ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬೆಂಗಳೂರು;ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಅವರನ್ನು ತೆಗೆದು ಹಾಕಲಾಗಿದೆ.
ಬಿಜೆಪಿಯಿಂದ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬಿಜೆಪಿಯ ರಾಷ್ಟ್ರೀಯ ಪ್ರಧಾನಿ ಹುದ್ದೆಯಿಂದ ಸಿ.ಟಿ ರವಿ ಅವರಿಗೆ ಕೋಕ್ ನೀಡಿರೋದಾಗಿ ತಿಳಿದು ಬಂದಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ದ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಬಿಜೆಪಿ ಹೈಕಮಾಂಡ್ ನೀಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರೆದಿದ್ದರು.

ಇದೀಗ ಆ ಹುದ್ದೆಯಿಂದ ಅವರಿಗೆ ಕೋಕ್ ನೀಡಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್