ಸಿಟಿ ರವಿಗೆ ದಿಡೀರ್ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು;ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ದಿಢೀರ್ ಅನಾರೋಗ್ಯವಾಗಿದ್ದು,ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ‌ದಾಖಲಿಸಲಾಗಿದೆ.

ಕಿಡ್ನಿ ಕಲ್ಲಿನ ಸಮಸ್ಯೆಯಿಂದ ಈ ಹಿಂದೆ ಸಿಟಿ ರವಿ ಚುನಾವಣಾ ಪ್ರಚಾರದ ವೇಳೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಬಳಿಕ ಬಿಡುಗಡೆಯಾಗಿದ್ದರು.

ಇದೀಗ ಸಿಟಿ ರವಿ ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿ ಜನರಿಗೆ ಮೋಸ ಮಾಡಿದೆ-ಜಗದೀಶ್ ಶೆಟ್ಟರ್

ಬಿಜೆಪಿಯವರು ಜನರಿಗೆ ಮೋಸ ಮಾಡಿದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ‌.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ‌ಬಿಜೆಪಿ ಸರ್ಕಾರ ಯಾವುದನ್ನೂ ಕೂಡ ಸರಿಯಾಗಿ ಅನುಷ್ಠಾನಕ್ಕೆ ತರಲಿಲ್ಲ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿಲ್ಲ ಎಂದು ಹೇಳಿದ್ದಾರೆ.

ಕೈಗಾರಿಕೆಗೆ ಎರಡು ಹೆಕ್ಟೇರ್‌ ಜಮೀನು ಕೊಡಲು ಆಗಿಲ್ಲ. ಕೆಲಸ ಮಾಡಲು ಆಗದ ಸಿಎಂ ಯಾಕೇ ಇರಬೇಕು? ಬೊಮ್ಮಾಯಿ ನಮ್ಮವರು ಆಗಿದ್ದರು, ಆದರೆ ಅವರ ಕೈಯಲ್ಲಿ ಏನು ಮಾಡಲು ಆಗಿಲ್ಲ ಅನ್ನುವುದು ಜನರ ಭಾವನೆ ಆಗಿದೆ ಎಂದು ಶೆಟ್ಟರ್ ಹೇಳಿದರು.

ಈಗ ನಾನು ಲೆಕ್ಕಾಚಾರ ಮಾಡಿದ್ದಕ್ಕಿಂತ ದ್ವಿಗುಣ ಬೆಂಬಲ ಸಿಕ್ಕಿದೆ.ಗೆಲುವಿನ ಅಂತರ ಕಳೆದ ಬಾರಿಗಿಂತ ಹೆಚ್ಚಾಗಲಿದೆ. ‌ನಾನು ಆರು ಎಲೆಕ್ಷನ್ ಮಾಡಿದ್ದೀನಿ, ಮತದಾರರಿಗೆ ಹಣ ಹಂಚಿರಲಿಲ್ಲ.ಬಿಜೆಪಿಯ ಹೆಸರು ಹೇಳಿಕೊಳ್ಳುವ ವ್ಯಕ್ತಿಗಳು ನಮ್ಮ ಕ್ಷೇತ್ರದಲ್ಲಿ ಹತಾಶರಾಗಿ ಹಣ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಸ್ಲಮ್‌ಗಳಲ್ಲಿ ಜನರಿಗೆ ಐದು‌ನೂರು, ಸಾವಿರ ಹಣ ಕೊಟ್ಟಿದ್ದಾರೆ. ಹಣ ಬಲದ ಮೇಲೆ ಗೆಲ್ಲುವುದಾದರೆ ಬಹಳಷ್ಟು ಶ್ರೀಮಂತರೇ ಗೆಲ್ಲುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚುವ ಒಂದು ಗೀಳಾಗಿಬಿಟ್ಟಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com