ಗೋ ಮಾಂಸ ಸಾಗಾಟ ಆರೋಪ; ಶ್ರೀರಾಮಸೇನೆ ಕಾರ್ಯಕರ್ತರಿಂದ ಕಾರಿಗೆ ಬೆಂಕಿ

ದೊಡ್ಡಬಳ್ಳಾಪುರ; ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಾಹನಗಳನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಕಾರೊಂದಕ್ಕೆ ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಮುಂಜಾನೆ ನಡೆದಿದೆ.

ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದ ಬಳಿ ಇಂದು ಬೆಳಗ್ಗೆ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ತಡೆದಿದ್ದಾರೆ. ಬಳಿಕ ವಾಹನಗಳಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಜೈಶ್ರೀರಾಂ ಎಂದು ಜೈಕಾರ ಹಾಕುತ್ತಿರುವುದು, ಮಾಂಸಗಳನ್ನು ವಾಹನದಿಂದ ಕೆಳಕ್ಕೆ ಎಸೆದಿರುವುದು ಕಂಡು ಬಂದಿದೆ.

ಆಂಧ್ರಪ್ರದೇಶದಿಂದ ಗೋಮಾಂಸವನ್ನು ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಈ ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಗೋ ಮಾಂಸ ಸಾಗಾಟ ಮಾಡುತ್ತಿದ್ದ ಐದು ವಾಹನ ಹಾಗೂ ಅವುಗಳ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು