ವೃದ್ಧನಿಗೆ ಬಲೆ ಬೀಸಿ ಲೈಂಗಿಕ ಕ್ರಿಯೆ ನಡೆಸಿ ವಿಡಿಯೋವನ್ನು ಪೋರ್ನ್ ವೆಬ್ ಸೈಟ್ ಗೆ ಅಪ್ಲೋಡ್ ಮಾಡಿದ ಯುವತಿ; ವೃದ್ಧ ಮರ್ಯಾದೆಗೆ ಅಂಜಿ ಆತ್ಮಹತ್ಯೆ

ಕಾಲೇಜು ವಿದ್ಯಾರ್ಥಿನಿಯೋರ್ವಳು ವೃದ್ಧನ ಜೊತೆ ಲೈಂಗಿಕ ಕ್ರಿಯೆ ನಡೆಸಿ ಅದನ್ನು ಮೊಬೈಲ್​ ಕ್ಯಾಮೆರಾದಿಂದ ವಿಡಿಯೋ ರೆಕಾರ್ಡ್​ ಮಾಡಿಕೊಂಡು ಪೋರ್ನ್​ ವೆಬ್​ಸೈಟ್​ಗೆ ಅಪ್​ಲೋಡ್​ ಮಾಡಿದ್ದು, ವೃದ್ಧ ಅವಮಾನ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ವಿಡಿಯೋವೊಂದು ಸೋರಿಕೆಯಾದ ಬೆನ್ನಲ್ಲೇ 72 ವರ್ಷದ ವೃದ್ಧನೊಬ್ಬ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಸ್ಸಾಂನ ಜೊರ್ಹಾತ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಯುವತಿಯನ್ನು ದರ್ಶನಾ ಭಾರಾಲಿ ಎಂದು ಗುರುತಿಸಲಾಗಿದೆ.ದರ್ಶನಾ ವೃದ್ಧನಿಗೆ ನಂಬಿಸಿ ಆತನೊಂದಿಗೆ ಲೈಂಗಿಕ ನಡೆಸಿ, ಮೊಬೈಲ್​ ಕ್ಯಾಮೆರಾದಿಂದ ವಿಡಿಯೋ ರೆಕಾರ್ಡ್​ ಮಾಡಿಕೊಂಡು ಪೋರ್ನ್​ ವೆಬ್​ಸೈಟ್​ಗೆ ಅಪ್​ಲೋಡ್​ ಮಾಡಿರುವ ಆರೋಪ ಕೇಳಿಬಂದಿದೆ.

ಜೋರ್ಹಾತ್​ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವೃದ್ಧ ಮತ್ತು ಅವರ ಕುಟುಂಬಕ್ಕೆ ಅಪಾರ ಹಾನಿ ಉಂಟು ಮಾಡಿದೆ.

ವಿಡಿಯೋದಿಂದ ಉಂಟಾದ ಮುಜುಗರ ಮತ್ತು ಅವಮಾನವನ್ನು ಸಹಿಸಲಾಗದ ಸಂತ್ರಸ್ತ ತನ್ನ ಜೀವನವನ್ನು ಕೊನೆಗೊಳಿಸುವ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. ಆರೋಪಿ ಯುವತಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮೃತ ವೃದ್ಧನ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಸ್ಥಳೀಯ ಪೊಲೀಸರು ಆರೋಪಿ ಯುವತಿಯನ್ನು ಬಂಧಿಸಿದ್ದು, ಆಕೆಯ ವಿರುದ್ಧ ಭಾರತೀಯ ದಂಡ ಸಂಹಿತಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಇದೀಗ ಯುವತಿ ಏಕಾಂಗಿಯಾಗಿ ಕೃತ್ಯ ಎಸಗಿದ್ದಾಳೆಯೇ? ಅಥವಾ ಆಕೆಯೊಂದಿಗೆ ಯಾರಾದರೂ ಕೈಜೋಡಿಸಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com