ನಿಂತಿದ್ದ ಲಾರಿಗೆ ಕಾರು ಢಿಕ್ಕಿ; ಐವರು ಮೃತ್ಯು, ನಾಲ್ವರಿಗೆ ಗಾಯ

ಧಾರವಾಡ; ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರ ಬಳಿ ನಡೆದಿದೆ.

ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ ಮೃತಪಟ್ಟಿದ್ದು.  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ನಾಗಪ್ಪ ಈರಪ್ಪ ಮುದ್ದೋಜಿ(29), ಅವರಾದಿ ಗ್ರಾಮದ ಮಹಂತೇಶ್ ಬಸಪ್ಪ ಮುದ್ದೊಜಿ(40), ಬಸವರಾಜ್ ಶಿವಪುತ್ರಪ್ಪ ನರಗುಂದ(35), ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ, ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ (35) ಎಂದು ಗುರುತಿಸಲಾಗಿದೆ.

ನಾಲ್ವರು ಗಾಯಗೊಂಡಿದ್ದು  ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳಗಾವಿಯಿಂದ ಧಾರವಾಡ ಕಡೆಗೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಗರಗ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್

ರಾಹುಲ್ ಗೆ ಜೈಲು ಶಿಕ್ಷೆ ತೀರ್ಪು ಬೆನ್ನಲ್ಲೇ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಮಾಜಿ ಸಚಿವೆ; ಏನಿದು ಮೋದಿ ಹೇಳಿಕೆ

ನವದೆಹಲಿ;ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಮೋದಿ ಉಪನಾಮ ಮಾನನಷ್ಟಕ್ಕೆ ಸಂಬಂಧಿಸಿ ಜೈಲು ಶಿಕ್ಷೆ

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com