BIG NEWS ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್; ಬೆಚ್ಚಿಬಿದ್ದ ಜನ

ಧಾರವಾಡ: ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ ನಡೆದಿದೆ.

ಮಹಮ್ಮದ್ ಕುಡಚಿ, ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಮನೆ ಎದುರು ಕುಳಿತಾಗ ದಾಳಿ ಮಾಡಿದ ಗುಂಪು ಮಚ್ಚಿನಿಂದ ಕೊಚ್ಚಿ ಮಹಮ್ಮದ್ ಕುಡಚಿ ಅವರನ್ನು ಕೊಲೆ ಮಾಡಲಾಗಿದೆ.

ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿದ್ದಾನೆ ಎಂದು ಶಂಕಿಸಲಾಗಿದೆ.

ರಸ್ತೆಯುದ್ದಕ್ಕೂ ರಕ್ತ ಬಿದ್ದಿದೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಆತನ ಹೆಸರು ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com