ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ

ಮಂಗಳೂರು;ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ..

ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮಾಲಾಡಿ ಕೋರ್ಟ್‌ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು.ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಾಲಕೃಷ್ಣ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಅವರು ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಅವರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಕೇರಳ ಪ್ರವೇಶಿಸಿದ ಮಳೆ

ಕೇರಳ;ಮುಂಗಾರು ಮಳೆ ನಿನ್ನೆ ಕೇರಳ ಪ್ರವೇಶಿಸಿದೆ. ಇದರಿಂದಾಗಿ ಕರ್ನಾಟಕಕ್ಕೆ ಕೆಲವೇ ದಿನಗಳಲ್ಲಿ ಮಳೆ ಪ್ರವೇಶಿಸಲಿದೆ.

ನೈಋತ್ಯ ಮಾನ್ಸೂನ್ ದಕ್ಷಿಣ ಅರೇಬಿಯನ್ ಸಮುದ್ರದ ಉಳಿದ ಭಾಗಗಳು ಮತ್ತು ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಸಂಪೂರ್ಣ ಲಕ್ಷದ್ವೀಪ ಪ್ರದೇಶ, ಕೇರಳದ ಹೆಚ್ಚಿನ ಭಾಗಗಳಲ್ಲಿ ಪ್ರಾರಂಭವಾಗಿದೆ.

ನೈಋತ್ಯ ಮಾನ್ಸೂನ್ ಇಂದು, ಜೂನ್ 08, 2023 ರಂದು ಕೇರಳವನ್ನು ಪ್ರವೇಶಿಸಿದೆ ಎಂದು ಹೇಳಿದೆ. ಕರ್ನಾಟಕಕ್ಕೆ ಕೆಲವೇ ದಿನಗಳಲ್ಲಿ ಪ್ರವೇಶಿಸಲಿದೆ ಎಂಬುದಾಗಿ ತಿಳಿಸಿದೆ.

ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಬುಧವಾರದಿಂದ ಕೇರಳದಲ್ಲಿ ಮಳೆ ಆಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಕೇರಳದ ಇನ್ನಿತರ ಪ್ರಾಂತ್ಯಗಳು ಸೇರಿದಂತೆ, ಕರ್ನಾಟಕ, ತಮಿಳುನಾಡಿಗೂ ಮುಂಗಾರು ಮಾರುತಗಳು ಹಬ್ಬಲಿವೆ.

ಟಾಪ್ ನ್ಯೂಸ್