ಮಂಗಳೂರು;ಅನೈತಿಕ ಪೊಲೀಸ್ ಗಿರಿ ಪ್ರಕರಣ, ಇಬ್ಬರ ಬಂಧನ

ಮಂಗಳೂರು:ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉರ್ವ ಠಾಣೆ ಪೊಲೀಸರು‌ ಬಂಧಿಸಿರುವ ಬಗ್ಗೆ ವರದಿಯಾಗಿದೆ.

ದೀಕ್ಷಿತ್‌(32) ಹಾಗೂ ಲಾಯ್ಡ್‌ ಪಿಂಟೋ(32)ಬಂಧಿತರು.

ಆರೋಪಿಗಳಿಂದ ಸ್ಕೂಟರ್‌ ಮತ್ತು ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಅಲ್ಲದೆ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಲಾಗಿದೆ.

6 ಮಂದಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ವಿಹಾರಕ್ಕೆ ತೆರಳಿದ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿತ್ತು.

ಟಾಪ್ ನ್ಯೂಸ್