ಪೊಲೀಸರು ವಿಚಾರಣೆಗೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ; ಘಟನೆ ಬೆನ್ನಲ್ಲೆ ಇನ್ಸ್ ಪೆಕ್ಟರ್ ಸೇರಿ ಐವರು ಪೊಲೀಸರು ಅಮಾನತು

ಪೊಲೀಸರು ವಿಚಾರಣೆಗೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ; ಘಟನೆ ಬೆನ್ನಲ್ಲೆ ಇನ್ಸ್ ಪೆಕ್ಟರ್ ಸೇರಿ ಐವರು ಪೊಲೀಸರು ಅಮಾನತು

ಕಾರವಾರ:ಕಳ್ಳತನ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಆರೋಪಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಜೂನ್ 24ರಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ.

ಜೂನ್ 24ರಂದು ಬಿಹಾರ ಮೂಲದ ವ್ಯಕ್ತಿ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈಂ ಪಿಎಸ್​ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾದ ಮಹಾವೀರ, ರಮೇಶ್, ಸಂತೋಷ್ ಅಮಾನತುಗೊಂಡಿದ್ದಾರೆ.

ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದು, ಆ ವೇಳೆ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಆರೋಪಿ ಮೃತಪಟ್ಟಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್