ಮೆಟ್ರೋದಲ್ಲಿ ವಿಡಿಯೊ ನೋಡುತ್ತಾ ನಾಚಿಕೆಯೇ ಇಲ್ಲದೆ ಪ್ರಯಾಣಿಕರ ಎದುರು ಹಸ್ತಮೈಥುನ ಮಾಡಿಕೊಂಡ ಯುವಕ, ವಿಡಿಯೋ ವೈರಲ್ ಬೆನ್ನಲ್ಲೇ ಕೇಸ್ ದಾಖಲು…
ಹೊಸದಿಲ್ಲಿ: ದಿಲ್ಲಿ ಮೆಟ್ರೋದಲ್ಲಿ ಯುವಕನೊಬ್ಬ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ, ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ದಿಲ್ಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ್ದಾರೆ.
ಘಟನೆಯು ಅತ್ಯಂತ ಗಂಭೀರವಾದ ವಿಷಯ ಎಂದು ಮಹಿಳಾ ಆಯೋಗದ ಅಧ್ಯಕ್ಷರು ನೋಟಿಸ್‌ನಲ್ಲಿ ಸೂಚಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ ಸ್ವಾತಿ, ಮೇ 1ರೊಳಗೆ ಎಫ್‌ಐಆರ್‌ನ ಪ್ರತಿ ಮತ್ತು ತೆಗೆದುಕೊಂಡ ಕ್ರಮದ ವಿವರಗಳನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದರು.
ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ನೋಡುತ್ತಾ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಗಮನಿಸಿದ ಅನೇಕ ಸಹಪ್ರಯಾಣಿಕರು ಆತನ ಬಳಿಯಿಂದ ಎದ್ದು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ದೇವೇಶ್ ಕುಮಾರ್ ಮಹಲಾ ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 294 ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ವೈರಲ್ ವೀಡಿಯೋವೊಂದರಲ್ಲಿ ದೆಹಲಿ ಮೆಟ್ರೋದಲ್ಲಿ ಯಾವುದೇ ನಾಚಿಕೆ ಇಲ್ಲದೆ ವ್ಯಕ್ತಿಯೊಬ್ಬರು ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ಇದು ಅಸಹನೀಯ ಮತ್ತು ಅಸಹ್ಯಕರವಾಗಿದೆ. ಈ ಸಂಬಂಧ ತಪ್ಪಿತಸ್ಥರನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ದೆಹಲಿ ಮೆಟ್ರೋದಲ್ಲಿ ಇಂತಹದ್ದು ವರ್ತನೆ ಹೆಚ್ಚಿವೆ. ಆದ್ದರಿಂದ ಅಂತಹವರನ್ನು ಶಿಕ್ಷಿಸಿ. ಮೆಟ್ರೋದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಾತ್ರಿಪಡಿಸಬೇಕು ಎಂದು ಸ್ವಾತಿ ಮಲಿವಾಲ್ ಆಗ್ರಹಿಸಿದ್ದಾರೆ.
ವೀಡಿಯೊ ವೈರಲ್ ಆದ ನಂತರ, ದೆಹಲಿ ಮೆಟ್ರೋ ಅಧಿಕಾರಿಗಳು ಈ ವಿಷಯದ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪ್ರಯಾಣಿಕರು ಜವಾಬ್ದಾರಿಯಿಂದ ವರ್ತಿಸುವಂತೆ ಅಧಿಕಾರಿಗಳು ಕೇಳಿಕೊಂಡಿದ್ದಾರೆ. ಅಂತಹ ಚಟುವಟಿಕೆಗಳನ್ನು ನೀವು ಗಮನಿಸಿದರೆ, ನಿಲ್ದಾಣ ಮತ್ತು ಸಮಯ ಸೇರಿದಂತೆ ವಿವರಗಳೊಂದಿಗೆ ದೆಹಲಿ ಮೆಟ್ರೋದ ಸಹಾಯವಾಣಿಗೆ ತಿಳಿಸಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.