ಬೀದಿ ನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲು

ಬೀದಿ ನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲು

ನವದೆಹಲಿ;ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ ವಿಚಿತ್ರಾ ವೀರ್ ಮಾತನಾಡಿ, ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸತ್ಯಾಸತ್ಯತೆ ದೃಢಪಟ್ಟ ನಂತರ ನಾವು ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ವ್ಯಕ್ತಿಯೋರ್ವ ಬೀದಿ ನಾಯಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಬಗ್ಗೆ ಸ್ಥಳೀಯರೊಬ್ಬರು ದೂರು ಸಲ್ಲಿಸಿರುವುದಾಗಿ ಡಿಸಿಪಿ ತಿಳಿಸಿದ್ದಾರೆ.

ಟಾಪ್ ನ್ಯೂಸ್