ವಿವಾದಿತ ದೆಹಲಿ ಸೇವಾ ಮಸೂದೆ ಲೋಕಸಭೆಯಲ್ಲಿ‌ ಮಂಡನೆ

ನವದೆಹಲಿ;ದೆಹಲಿ ಸೇವಾ ಮಸೂದೆಯನ್ನು ಲೋಕಸಭೆಯಲ್ಲಿ ನಿನ್ನೆ ಮಂಡನೆ ಮಾಡಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆಯನ್ನು ಮಂಡಿಸಿದರು.

ದೆಹಲಿ ರಾಷ್ಟ್ರ ರಾಜಧಾನಿ ಪ್ರದೇಶದ (ತಿದ್ದುಪಡಿ) ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದನ್ನು ಅಮಿತ್‌ ಶಾ ವಿರೋಧ ಪಕ್ಷಗಳು ‘ರಾಜಕೀಯ’ಮಾಡುತ್ತಿದೆ ಎಂದು ಹೇಳಿದ್ದಾರೆ.

ದೆಹಲಿ ರಾಜ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನನ್ನು ಅಂಗೀಕರಿಸುವ ಅಧಿಕಾರವನ್ನು ಸಂವಿಧಾನವು ಸದನಕ್ಕೆ ನೀಡಿದೆ.ದೆಹಲಿ ರಾಜ್ಯಕ್ಕೆ ಸಂಬಂಧಿಸಿದಂತೆ ಸಂಸತ್ತು ಯಾವುದೇ ಕಾನೂನನ್ನು ತರಬಹುದು ಎಂದು ಮಸೂದೆ ಮೂಲಕ ಸ್ಪಷ್ಟಪಡಿಸಿದರು.

ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ದೆಹಲಿಯ ಮೇಲೆ ಕೇಂದ್ರ ಸರ್ಕಾರ ಅಧಿಕಾರ ಹೊಂದುವುದು ಸಂವಿಧಾನ ವಿರೋಧಿ ನೀತಿಯಾಗಿದೆ. ಜನರಿಂದ ಆಯ್ಕೆಯಾಗಿರುವ ರಾಜ್ಯ ಸರ್ಕಾರದ ಮೇಲೆ ನಿಯಂತ್ರಣ ಸಾಧಿಸುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್