ಬೆಂಗಳೂರು;ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ದೇವೇಗೌಡ ಅವರಿಗೆ ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್ಗೆ ಆಸ್ಪತ್ರೆಗೆ ಆಗಮಿಸಿದ್ದರು. ಆರೋಗ್ಯ ಪರಿಶೀಲನೆ ನಡೆಸಿದ್ದ ವೈದ್ಯರು, ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ 10:30ರ ವೇಳೆಗೆ ಹೆಚ್ಡಿಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು, ದೇವೇಗೌಡರು ಆರೋಗ್ಯ ತಪಾಸಣೆಗೆ ಹೋಗಿದ್ದಾರೆ ಎಂದು ತಿಳಿಸಿದ್ದರು.