BIG NEWS ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

BIG NEWS ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

ಕೊಯಮತ್ತೂರು:ಕೊಯಮತ್ತೂರು ಡಿಐಜಿ ವಿಜಯಕುಮಾರ್ ಅವರು ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು.

ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್​ನಲ್ಲಿ ಡಿಎಸ್​ಪಿಯಾಗಿ ಕೆಲಸ ಮಾಡಿದ್ದಾರೆ.

ಈ ಕುರಿತು ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ಐಪಿಎಸ್ ಅಧಿಕಾರಿ ಬೆಳಿಗ್ಗೆ 6.45 ರ ಸುಮಾರಿಗೆ ತಮ್ಮ ಬೆಳಗಿನ ವಾಕಿಂಗ್ ಬಳಿಕ ಮನೆಗೆ ಮರಳಿದರು ಮತ್ತು ತಮ್ಮ ಪಿಸ್ತೂಲ್ ನೀಡುವಂತೆ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿಯನ್ನು ಕೇಳಿದರು. ಬೆಳಗ್ಗೆ 6.50ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಉನ್ನತ ಪೊಲೀಸ್ ಮೂಲಗಳ ಪ್ರಕಾರ, ಅವರು ಖಿನ್ನತೆಗೆ ಒಳಗಾಗಿದ್ದರು. ನಿದ್ರೆಯ ಕೊರತೆಯಿಂದಾಗಿ ಔಷಧೋಪಚಾರದಲ್ಲಿದ್ದರು. “ಲಅವರಿಗೆ ಸಮಾಲೋಚನೆ ನಡೆಸಲಾಗಿದೆ ಮತ್ತು ಅವರ ಕುಟುಂಬವನ್ನು ಕೆಲವು ದಿನಗಳ ಹಿಂದೆ ಕೊಯಮತ್ತೂರ್ಗೆ ಕರೆತರಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ