ನವದೆಹಲಿ;ವೈಯಕ್ತಿಕ ಡಿಜಿಟಲ್ ಡೇಟಾ ಸಂರಕ್ಷಣಾ ಮಸೂದೆ- 2023ನ್ನು ಇಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಈ ಮಸೂದೆಯು ನಿಯಮದ ಉಲ್ಲಂಘನೆಗೆ ಗರಿಷ್ಟ 250 ಕೋಟಿ ರೂ.ಗಳವರೆಗೆ ದಂಡ ವಿಧಿಸುವ ಅವಕಾಶವನ್ನು ಒಳ ಗೊಂಡಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಆಗಸ್ಟ್ 3ರಂದು ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ, 2023ಅನ್ನು ಸಂಸತ್ತಿನಲ್ಲಿ ಮಂಡಿಸಿದರು.ಇದನ್ನು ಪರಿಶೀಲಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದವು.ಆದರೆ ಸದನದಲ್ಲಿ ಗದ್ದಲದ ನಡುವೆ ಮಸೂದೆ ಅಂಗೀಕಾರವಾಗಿದೆ.