ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಗೆ ಅಂತ್ಯವಾಡುತ್ತೇನೆ- ದಿನೇಶ್ ಗುಂಡೂರಾವ್; ಉಸ್ತುವಾರಿ ಸಚಿವರಾಗಿ ನೇಮಕದ ಬೆನ್ನಲ್ಲೆ ಸಚಿವರು ಏನೆಲ್ಲಾ ಹೇಳಿದ್ರು?

ಬೆಂಗಳೂರು;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಅಂತ್ಯಹಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಉಸ್ತುವಾರಿಯಾಗಿ ನೇಮಕಗೊಂಡ ಬೆನ್ನಲ್ಲೇ ವಿಕಾಸಸೌಧದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು.ಅಲ್ಲಿನ ಜನ ಶಾಂತಿ ಸೌಹಾರ್ಧತೆಯಿಂದ ಬಾಳಬೇಕು ಎಂದು ಆರೋಗ್ಯ ಸಚಿವ ಗುಂಡುರಾವ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ.

ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರು ಕೆಲಸ ಮಾಡಬೇಕು ಎಂದು ಗುಂಡೂರಾವ್ ಹೇಳಿದ್ದಾರೆ.

ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆ ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಮರುತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ, ಅದಕ್ಕೆ ಡಿಪಿಆರ್ ಕೂಡ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ತನಿಖೆಗೆ ಆದೇಶ ಹೊರಬೀಳಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ