ಬ್ರಾಹ್ಮಣರ ಬಗ್ಗೆ ಮಾತನಾಡಿದರೆ ಅವರ ಶಾಪ ತಟ್ಟದೆ ಬಿಡುವುದಿಲ್ಲ- ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ , ಮಾಜಿ ಸಿಎಂ ಹೇಳಿಕೆಯೊಂದಕ್ಕೆ ಅವರು ಏನೆಲ್ಲಾ ಹೇಳಿದ್ರು ಗೊತ್ತಾ?

ಬೆಂಗಳೂರು:ಬ್ರಾಹ್ಮಣರ ಬಗ್ಗೆ ಮಾತನಾಡಿದರೆ ಅವರ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಅವರು ಹೇಳಿದ್ದಾರೆ.

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಸಚಿವ ಜೋಶಿ & ಬ್ರಾಹ್ಮಣರ ಬಗ್ಗೆ ಕೊಟ್ಟ ಹೇಳಿಕೆಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬ್ರಾಹ್ಮಣ ಸಮುದಾಯದ ಕುರಿತು ಟೀಕಿಸಿರುವ ವಿಚಾರ ನನಗೆ ಗೊತ್ತಿಲ್ಲ. ಯಾಕೆ ಯಾವ ಉದ್ದೇಶದಿಂದ ಹೇಳಿದ್ದಾರೆ ಗೊತ್ತಿಲ್ಲ. ಜಾತಿ ಹೆಸರನ್ನು ಇಟ್ಟುಕೊಂಡು ಮಾತನಾಡುವುದು ಮಾಜಿ ಮುಖ್ಯಮಂತ್ರಿ ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಈ ಮೊದಲು ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ, ಚುಮಾವಣೆ ಬಳಿಕ ಪ್ರಹ್ಲಾದ್ ಜೋಶಿಯನ್ನು ಬಿಜೆಪಿ ಸಿಎಂ ಮಾಡುವ ಯೋಚನೆಯಲ್ಲಿದೆ.ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣರಲ್ಲ.ಜೋಶಿಯದ್ದು ಶೃಂಗೇರಿಯ ಮಠ ಒಡೆದ ಬ್ರಾಹ್ಮಣ ವರ್ಗ.ಮಹಾತ್ಮ ಗಾಂಧಿ ಅವರನ್ನು ಕೊಂದ ಬ್ರಾಹ್ಮಣರು ಇವರು.ಇವರು ನಮ್ಮ ಭಾಗದ ಹಳೆಯ ಬ್ರಾಹ್ಮಣರಂತೆ ಅಲ್ಲ.ಇವರು ಶೃಂಗೇರಿ ಮಠಕ್ಕೆ ಸೇರಿದವರಲ್ಲ. ಮರಾಠಿ ಪೇಶ್ವೆ ಸಮುದಾಯಕ್ಕೆ ಸೇರಿದವರು ಎಂದು ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com