ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ; ಮ್ಯಾಜಿಸ್ಟ್ರೇಟ್ ವರದಿಯನ್ನು ಅಂಗೀಕರಿಸಿದ ರಾಜ್ಯ ಸರಕಾರ!

ಬೆಂಗಳೂರು; ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರಕಾರ ಅಂಗೀಕರಿಸಿದೆ.

2020ರಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ನಡೆಸಿದ ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿಯನ್ನು ಸರಕಾರ ಅಂಗೀಕರಿಸಿದೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಸಂಪೂರ್ಣವಾದ ತನಿಖೆಯನ್ನು ನಡೆಸಿ 2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿಯನ್ನು ನೀಡಿತ್ತು.

ಈ ವರದಿಯಲ್ಲಿ ಪೊಲೀಸರ ಗೋಲಿಬಾರ್ ಕ್ರಮ ಸರಿಯಿದೆ ಎಂದು ಹೇಳಲಾಗುತ್ತು. ಅಂದು ಪೊಲೀಸರು ಗೋಲಿಬಾರ್ ಮಾಡಿರದಿದ್ದರೆ ಇಡೀ ಠಾಣೆ ಬೆಂಕಿ ಹಚ್ಚುತ್ತಿದ್ದರು. ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಕಾಪಾಡಲು ಗೋಲಿಬಾರ್ ನಡೆದಿದೆ ಎಂದು ರಿಪೋರ್ಟ್ ನಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮನೆಯ ಮೇಲೆ ನಡೆಸಿದ್ದ ದಾಳಿ ಹಾಗೂ ಪೊಲೀಸ್ ಠಾಣೆ ಮೇಲೆ ಬೆಂಕಿ ಹಚ್ಚಲು ಮುಂದಾಗಿದ್ದಾರೆಂದು ಪೊಲೀಸರು ಗೋಲಿಬಾರ್ ನಡೆಸಿದ್ದರು.

ಇದಕ್ಕೆ ಕಾಂಗ್ರೆಸ್ ಸರ್ಕಾರವು ಬಿಜೆಪಿಯು ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡುತ್ತಿದೆ ಹೀಗಾಗಿ ಮುಸ್ಲಿಮರ ಮೇಲೆ ನಕಲಿ ಗೋಲಿಬಾರ್ ನಡೆಸಿದ್ದಾರೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಆರೋಪ ಮಾಡಿತ್ತು. ಆದರೆ ಇದೀಗ ಕಾಂಗ್ರೆಸ್ ಬಿಜೆಪಿ ಅವಧಿಯ ತನಿಖಾ ಸಮಿತಿಯ ವರದಿಯನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಗೋಲಿಬಾರ್ ಪ್ರಕರಣದಲ್ಲಿ ನಮ್ಮ ಸರ್ಕಾರ ನೇಮಿಸಿದ್ದ ಕಮಿಟಿಯ ವರದಿಯನ್ನು ಕಾಂಗ್ರೆಸ್ ಸರ್ಕಾರ ಒಪ್ಪಿಕೊಂಡಿದೆ. ಇದು ಸರಿಯಾದ ಕ್ರಮ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್