ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು; ಭಾವುಕರಾಗಿ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್, ಗೆಲುವಿನ ಬಳಿಕ ಸಿದ್ದರಾಮಯ್ಯ ಮತ್ತು ಡಿಕೆಶಿ ಹೇಳಿದ್ದೇನು ಗೊತ್ತಾ?

ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ, ಕಾಂಗ್ರೆಸ್​​ಗೆ ಭರ್ಜರಿ ಗೆಲುವು ದೊರೆಯುವುದು ಖಚಿತವಾಗಿದೆ.

ಕನಕಪುರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆಲುವು ಸಾಧಿಸಿದ್ದು, ಭಾವುಕರಾಗಿ ಕಣ್ಣೀರು ಹಾಕಿದ್ದಾರೆ‌

ಕರ್ನಾಟಕದ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ವರಿಷ್ಠರಿಗೆ ಧನ್ಯವಾದಗಳು ಎಂದು ಅವರು ಹೇಳಿದರು.ಇದರ ಜೊತೆ ಸೋನಿಯಾ ಗಾಂಧೀ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾವುಕರಾಗಿ ಧನ್ಯವಾದ ಹೇಳಿದ್ದಾರೆ.

ಸಿದ್ದರಾಮಯ್ಯ ಗೆಲುವಿನ ಬಳಿಕ ಪ್ರತಿಕ್ರಿಯೆ

ಲೋಕಸಭೆ ಚುನಾವಣೆಯ ಹೊತ್ತಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇನ್ನಷ್ಟು ಪ್ರಬಲವಾಗಲಿದೆ. ನಮ್ಮ ಬಳಿ ಸಂಪನ್ಮೂಲ ಕಡಿಮೆಯಿತ್ತು.ಅವರು ಪ್ರತಿ ಅಭ್ಯರ್ಥಿಗೆ 10 ಕೋಟಿಯವರೆಗೂ ಖರ್ಚು ಕೊಟ್ಟಿದ್ದಾರೆ.ನಾವು ಬಿ ಫಾರಂ ಕೊಟ್ಟು ಸಣ್ಣಪುಟ್ಟ ಸಹಾಯ ಮಾಡಿದೆವು ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಶಾಸಕಾಂಗ ಪಕ್ಷದ ಸಭೆ ನಡೆಯುವುದು ಅನುಮಾನ. ನಾಳೆ ನಡೆಯಬಹುದು. ಎಲ್ಲ ವಿಜೇತರಿಗೂ ಬರಲು ಹೇಳಿದ್ದೇವೆ. ಅಲ್ಲಿ ಮುಂದಿನ ತೀರ್ಮಾನ ಆಗುತ್ತದೆ. ಮುಂದಿನ ಮುಖ್ಯಮಂತ್ರಿಯನ್ನು ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯದ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ, ಅಮಿತ್ ಶಾ ನೂರು ಸಲ ಬಂದರೂ ಕರ್ನಾಟಕದ ಮತದಾರರ ಮೇಲೆ ಏನೂ ಪರಿಣಾಮ ಬೀರಲ್ಲ. ಲೋಕಸಭೆಯ ಹೊತ್ತಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇನ್ನಷ್ಟು ಪ್ರಬಲವಾಗಲಿದೆ. ಇನ್ನೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ದೇಶವನ್ನು ಕಾಂಗ್ರೆಸ್ ಮುಕ್ತ ಮಾಡ್ತೀವಿ ಅಂತ ಬಿಜೆಪಿ ಹೇಳಿದೆ. ಆದರೆ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಇಲ್ಲ. ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ, ಒಡಿಶಾದಲ್ಲಿ ಬಿಜೆಪಿ ಇಲ್ಲ. ಹಿಮಾಚಲ ಪ್ರದೇಶ, ದೆಹಲಿಯಲ್ಲಿ ಬಿಜೆಪಿ ಇಲ್ಲ. ಕಾಂಗ್ರೆಸ್‌ ಪಕ್ಷದ ಗೆಲ್ಲುವ ಭರವಸೆ, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಆಗಿದೆ ಎಂದು ಹೇಳಿದರು.

ನಾನು ಹಿಂದಿನಿಂದಲೂ ನನ್ನ ಪ್ರಚಾರದಲ್ಲಿ ಹೇಳುತ್ತಲೇ ಇದ್ದೆ. ಕಾಂಗ್ರೆಸ್ ಪಕ್ಷವು ಸುಮಾರು 130 ಸ್ಥಾನ ಪಡೆಯಬಹುದು ಎಂಬ ವಿಶ್ವಾಸ ನನಗಿತ್ತು ಅದೇ ರೀತಿ ಹಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com