BIG NEWS ಈದ್ಗಾ ಮೈದಾನ ವಿವಾದ; ಬಕ್ರೀದ್, ರಂಜಾನ್ ಹಬ್ಬಗಳಿಗೆ ಮಾತ್ರ ಅವಕಾಶ, ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಮಧ್ಯಂತರ ತೀರ್ಪು; ತೀರ್ಪಿನಲ್ಲಿ ಏನೇನಿದೆ?

ಈದ್ಗಾ ಮೈದಾನ ವಿವಾದ; ಬಕ್ರೀದ್, ರಂಜಾನ್ ಹಬ್ಬಗಳಿಗೆ ಮಾತ್ರ ಅವಕಾಶ, ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಮಧ್ಯಂತರ ತೀರ್ಪು
ಬೆಂಗಳೂರು;ಈದ್ಗಾ ಮೈದಾನ ವಿವಾದ ಹಿನ್ನೆಲೆ‌ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ವಿವಾದಕ್ಕೆ ಮೊದಲಿದ್ದಂತೆ ಯಥಾಸ್ಥಿತಿ ಕಾಯ್ದುಕೊಳ್ಳವಂತೆ ಹೈಕೋರ್ಟ್ ಸೂಚಿಸಿದೆ. ಇದನ್ನು ಆಟದ ಮೈದಾನವಾಗಿ ಬಳಸಬೇಕು ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ರಂಜಾನ್,ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಬಳಸಲು ಅನುಮತಿ ಇದೆ. ಆದರೆ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಹೈಕೋರ್ಟ್ ಹೇಳಿದೆ.ಮುಂದಿನ ಆದೇಶದವರೆಗೂ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚಿಸಿದೆ.

ಯಾವುದೇ ವಿವಾದಕ್ಕೆ ಅವಕಾಶ ಮಾಡಿಕೊಡಬೇಡಿ. ಮೈದಾನವಾಗಿರುವುದರಿಂದ ಯಥಾಸ್ಥಿತಿ ಕಾಪಾಡಿ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ.ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಈ ಆದೇಶ ನೀಡಿದೆ.
ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡುವುದಕ್ಕೆ ಅನುಮತಿ ಬೇಕಿಲ್ಲ ಎಂದು‌ ಹೇಳಿದ ಹೈಕೋರ್ಟ್ ಪೀಠ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.


ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು