ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣದ ಹಾದಿಯಲ್ಲಿದೆ.ಕಾಂಗ್ರೆಸ್ ಬಹುಮತದತ್ತ ಸಾಗಿದೆ.
127 ಕ್ಷೇತ್ರಗಳಲ್ಲಿ ಮುನ್ನಡೆ ಮೂಲಕ ಕಾಂಗ್ರೆಸ್ ಬಹುಮತದತ್ತ ಸಾಗಿದೆ.ಅದೇ ರೀತಿ ಬಿಜೆಪಿ 68 ಕ್ಷೇತ್ರಗಳಲ್ಲಿ, ಜೆಡಿಎಸ್ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮೊಳಕಾಲ್ಮೂರಿನಲ್ಲಿ ಬಿಜೆಪಿಯ ಅಭ್ಯರ್ಥಿ ಹಾಲಿ ಸಚಿವ ಬಿ. ಶ್ರೀ ರಾಮುಲು ತೀವ್ರ ಮುಖಭಂಗವನ್ನು ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ ವಿರುದ್ಧ 26 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.
ದಾವಣಗೆರೆ ಉತ್ತರ ಕ್ಷೇತ್ರ ಕಾಂಗ್ರೆಸ್ ಗೆಲುವು, ಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆ ಭಾರೀ ಹಿನ್ನೆಡೆಯಾಗಿದೆ.ಶಿವಮೊಗ್ಗ ನಗರದಲ್ಲಿ ಆಯನೂರ್ ಮಂಜುನಾಥ್ ಗೆ ಸೋಲಾಗಿದೆ.ಬಿಜೆಪಿಯ ಚನ್ನಬಸಪ್ಪಗೆ ಸೋಲಾಗಿದೆ.